Adsense

Monday 20 July 2020

ಹಾಲಲ್ಲಾದರು ಹಾಕು ನೀರಲ್ಲಾದರು ಹಾಕು ರಾಘವೇಂದ್ರ

ರಾಘವೇಂದ್ರ ಸ್ವಾಮಿ ಸಾಹಿತ್ಯ 



ಹಾಲಲ್ಲಾದರು ಹಾಕು ನೀರಲ್ಲಾದರು ಹಾಕು ರಾಘವೇಂದ್ರ 
ಹಾಲಲ್ಲಿ ಕೆನೆಯಾಗಿ, ನೀರಲ್ಲಿ ಮೀನಾಗಿ ಹಾಯಾಗಿರುವೆ ರಾಘವೇಂದ್ರ ||

ಮುಳ್ಳಲ್ಲಾದರು ನೂಕು, ಕಲ್ಲಲ್ಲಾದರು ನೂಕು ರಾಘವೇಂದ್ರ
ಮುಳ್ಳಲ್ಲಿ ಮುಳ್ಳಾಗಿ, ಕಲ್ಲಲ್ಲಿ ಕಲ್ಲಾಗಿ ಒಂದಾಗಿರುವೆ ರಾಘವೇಂದ್ರ 

ಬಿಸಿಲಲ್ಲಿ ಒಣಗಿಸು, ನೆರಳಲ್ಲಿ ಮಲಗಿಸು ರಾಘವೇಂದ್ರ
ಬಿಸಿಲಲ್ಲಿ ಕೆಂಪಾಗಿ, ನೆರಳಲ್ಲಿ ತಂಪಾಗಿ ನಗುನಗುತ ಇರುವೆ ರಾಘವೇಂದ್ರ || 1 ||

ಸುಖವನ್ನೇ ನೀಡೆಂದು ಎಂದೂ ಕೇಳೆನು ನಾನು ರಾಘವೇಂದ್ರ
ಮುನ್ನ ಮಾಡಿದ ಪಾಪ ಯಾರ ತಾತನ ಗಂಟು ನೀನೇ ಹೇಳು ರಾಘವೇಂದ್ರ 

ಎಲ್ಲಿದ್ದರೇನು ನಾ ಹೇಗಿದ್ದರೇನು ನಾ ರಾಘವೇಂದ್ರ
ನಿನ್ನಲ್ಲಿ ಶರಣಾಗಿ ನೀ ನನ್ನ ಉಸಿರಾಗಿ ಬಾಳಿದರೆ ಸಾಕು ರಾಘವೇಂದ್ರ ||2||

ಹಾಲಲ್ಲಾದರು ಹಾಕು ನೀರಲ್ಲಾದರು ಹಾಕು ರಾಘವೇಂದ್ರ
ಹಾಲಲ್ಲಿ ಕೆನೆಯಾಗಿ, ನೀರಲ್ಲಿ ಮೀನಾಗಿ ಹಾಯಾಗಿರುವೆ ರಾಘವೇಂದ್ರ ||



No comments:

Post a Comment

ರೌಡಿ ಅಥವಾ ದುಷ್ಕರ್ಮಿಯಿಂದ ಸಾವಿನ ಭಯದಿಂದ ರಕ್ಷಣೆಗೆ ಮಂತ್ರ ಮತ್ತು ತಂತ್ರ

 ರೌಡಿ ಅಥವಾ ದುಷ್ಕರ್ಮಿಯಿಂದ ಸಾವಿನ ಭಯದಿಂದ ರಕ್ಷಣೆಗೆ ಮಂತ್ರ ಮತ್ತು ತಂತ್ರ  ನಮ್ಮ ಜಾತಕದಲ್ಲಿ, ರೌಡಿ ಅಥವಾ ದುಷ್ಕರ್ಮಿಯಿಂದ ಸಾವಿನ ಸಾವಿನ ದೋಷ ಅಥವಾ ಭಯ ಇದ್ದರೆ, ಮಾ...